ಹುಬ್ಬಳ್ಳಿ : ಎಲ್ಲಾ ರೀತಿಯ ಸಂಶೋಧನೆ, ಪರೀಕ್ಷೆಗಳ ಬಳಿಕವೇ ಕೊರೋನಾ ಲಸಿಕೆ ಬಳಕೆಗೆ ನೀಡಲಾಗಿದೆ. ಈ ಬಗ್ಗೆ ಯಾರೂ ಅತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಕೊರೋನಾ ಲಸಿಕೆಯನ್ನು ನೀಡುವಲ್ಲಿ ಇಡೀ ರಾಷ್ಟ್ರದಲ್ಲಿಯೇ ರಾಜ್ಯ ಮುಂಚೂಣಿಯಲ್ಲಿದೆ. ಈ ಲಸಿಕೆ ಸುರಕ್ಷಿತವಾಗಿದೆ. ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಲಸಿಕೆಗೆ ಸಂಬಂಧಿಸಿದಂತೆ ಬೇಕಾದ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದೆ. ಆ ಬಳಿಕವೇ ಅನುಮತಿ ಒದಗಿಸಲಾಗಿದೆ. ಆ ಬಳಿಕವೇ ಇದನ್ನು ಜನರಿಗೆ ನೀಡಲು ಸರ್ಕಾರ ಪೂರಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಮಹಾಮಾರಿಗೆ ಜ. 16 ರಿಂದ ತೊಡಗಿದಂತೆ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸಿದ ಲಸಿಕೆಗಳನ್ನು ನೀಡುವುದಕ್ಕೆ ಆರಂಭ ಮಾಡಲಾಗಿದೆ. ಆರಂಭದಲ್ಲಿ ಕೊರೋನಾ ವಾರಿಯರ್ಸ್ಗಳಿಗೆ ಲಸಿಕೆ ನೀಡಲಾಗುತ್ತಿದೆ. ಸುಮಾರು 3 ಲಕ್ಷ ಜನರಿಗೆ ಕೊರೋನಾ ಲಸಿಕೆ ವಿತರಣೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.