ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಲಸಿಕೆ ನೀಡಿಕೆಯಲ್ಲಿಯೂ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಈ ಹಿಂದೆ ಕೊರೋನಾ ಮಾದರಿ ಪರೀಕ್ಷೆಗೆ ಸಂಬಂಧಿಸಿದಂತೆಯೂ ಈ ಹಿಂದೆ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿತ್ತು.
ಕೊರೋನಾ ಆರಂಭವಾದಂದಿನಿಂದ ಈ ವರೆಗೆ ಮಾದರಿ ಪರೀಕ್ಷೆ ಮಾಡುವ ಸಂಖ್ಯೆಯಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿತ್ತು. ಇದೀಗ ಭಾರತದ ಔಷಧ ತಯಾರಿಕಾ ಸಂಸ್ಥೆ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿರುವ ಕೊರೋನಾ ಲಸಿಕೆಗಳನ್ನು ನೀಡುವುದಕ್ಕೆ ಆರಂಭ ಮಾಡಲಾಗಿದ್ದು, ನಾಲ್ಕು ದಿನಗಳಲ್ಲೇ 80,686 ಮಂದಿಗೆ ಕೊರೋನಾ ಲಸಿಕೆ ನೀಡುವ ಮೂಲಕ ಮತ್ತೊಮ್ಮೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಮೂಲಕ ಇತರ ರಾಜ್ಯಗಳಿಗೂ ಮಾದರಿಯಾಗಿದೆ.
ಈ ಹಿಂದೆ ಕೊರೋನಾ ಆರಂಭಿಕ ಸಮಯದಲ್ಲಿ ತ್ವರಿತ ಗತಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಲ್ಯಾಬ್ಗಳನ್ನು ಆರಂಭಿಸುವ ಮೂಲಕ ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿತ್ತು. ಕೇಂದ್ರ ಸರ್ಕಾರವೂ ಕೊರೋನಾ ವಿರುದ್ಧ ರಾಜ್ಯ ತೆಗೆದುಕೊಂಡಿದ್ದ ತ್ವರಿತ ಕ್ರಮಗಳಿಗೆ ಸಂಬಂಧಿಸಿದಂತೆ ಮೆಚ್ಚುಗೆ ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.