ಮೈಸೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಸುತ್ತೂರು ಶ್ರೀ ಮಠದಿಂದ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ನಿಧಿ ಸಮರ್ಪಣೆ ಮಾಡಲಾಗುವುದು ಎಂದು ಮಠಾಧೀಶರು ಘೋಷಿಸಿದ್ದಾರೆ.
ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ನಡೆದ ಸಂತರ ಸಮಾವೇಶದಲ್ಲಿ ಸುತ್ತೂರು ಮಠದ ಪೀಠಾಧಿಪತಿ ಡಾ ಶ್ರೀ ಶಿವರಾತ್ರಿ ದೇಶೀ ಕೇಂದ್ರದ ಸ್ವಾಮೀಜಿಗಳು ಸುತ್ತೂರು ಮಠದ ವತಿಯಿಂದ 10 ಲಕ್ಷ ರೂ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ವಿಜಯಾನಂದ ತೀರ್ಥರು 10 ಲಕ್ಷ ರೂ. ಗಳನ್ನು ಮಠದ ವತಿಯಿಂದ ನಿಧಿ ಸಮರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.
ಸಮಾವೇಶದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ವಿವಿಧ ಮಠಗಳ ಮಠಾಧೀಶರು, ರಾಮ ಜನ್ಮಭೂಮಿ ತೀರ್ಥಕ್ಷೇತ್ರ ನಿಧಿ ಸಮರ್ಪಣಾ ಅಭಿಯಾನದ ಕರ್ನಾಟಕದ ಅಧ್ಯಕ್ಷ ಮಾ ವೆಂಕಟರಾಮು, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರೊ. ಮಲ್ಲಿಕಾರ್ಜುನಪ್ಪ, ಎನ್ ಆರ್ ಮಂಜುನಾಥ್, ವಿ ಬಿ ಪ್ರದೀಶ್ ಕುಮಾರ್, ಜಿ ಎಸ್ ಗಣೇಶ್, ಬಿ ಎಸ್ ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.