ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯಾ ಸರಣಿಗಳು ಮುಂದುವರೆದೇ ಇದೆ. ದಿನವೊಂದಕ್ಕೆ ಇಬ್ಬರು ಮೂವರು ರೈತರು ಸಾವಿನ ಮನೆ ಸೇರುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 184 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
ಕರ್ನಾಟಕದಲ್ಲಿ ಕಳೆದ 3 ತಿಂಗಳಲ್ಲಿ 184 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ವರದಿ ನೀಡಿದೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಮೋಹನ್ಭಾಯ್ ಕುಂದರಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಜುಲೈನಲ್ಲಿ 152ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಜೂನ್ನಲ್ಲಿ 20 ರೈತರು ಮತ್ತು ಮೇನಲ್ಲಿ 12 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಶೂಲ ಆತ್ಮಹತ್ಯೆಗೆ ಪ್ರಮುಖ ಕಾರಣ ಎಂದು ರಾಜ್ಯ ಸರ್ಕಾರ ಹೇಳಿದೆ.
ಅದಕ್ಕಾಗಿ ಅಕ್ಕಿಗೆ ಕನಿಷ್ಠ ಬೆಂಬಲ ಬೆಲೆ, ರೈತರಿಗೆ ರಿಯಾಯಿತಿ ಸಾಲ, ಸಾಲ ಮನ್ನಾ ಮೊದಲಾದ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವತಿಯಿಂದಲೂ ರೈತರಿಗೆ ಸೂಕ್ತ ಸಹಾಯ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.