ನವದೆಹಲಿ: ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಎಲ್ಲಾ ಸಂಸದರಿಗೆ ಕೋವಿಡ್ -19 ಪರೀಕ್ಷೆಗೆ ಒಳಗಾಗುವಂತೆ ಕೋರಲಾಗಿದ್ದು, ಜನವರಿ 27 ರಿಂದ ಸಂಸತ್ತಿನ ಆವರಣದಲ್ಲಿ ಇದಕ್ಕಾಗಿ ವ್ಯವಸ್ಥೆ ಮಾಡಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ತಿಳಿಸಿದ್ದಾರೆ.
ಸಂಸತ್ತಿನ ಅಧಿವೇಶನದ ಪ್ರಾರಂಭದ ಬಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನವರಿ 29 ರಿಂದ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಸಾಮಾಜಿಕ ಅಂತರ ಮತ್ತು ನೈರ್ಮಲ್ಯೀಕರಣವನ್ನು ಕಾಪಾಡಿಕೊಳ್ಳುವುದು ಸೇರಿದಂತೆ ಅಗತ್ಯವಿರುವ ಎಲ್ಲ ಕೊರೋನಾವೈರಸ್ ಸಂಬಂಧಿತ ಪ್ರೋಟೋಕಾಲ್ಗಳನ್ನು ಅನುಸರಿಸಲಾಗುವುದು ಎಂದಿದ್ದಾರೆ.
ಸಾಂಕ್ರಾಮಿಕ ರೋಗದ ಮಧ್ಯೆ ಬಜೆಟ್ ಅಧಿವೇಶನ ನಡೆಸಲು ಬಿರ್ಲಾ ಮಂಗಳವಾರ ಉನ್ನತ ಸರ್ಕಾರಿ ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಸಂವಹನ ನಡೆಸಿದ ಲೋಕಸಭಾ ಸ್ಪೀಕರ್, “ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಕೋವಿಡ್-19 ಅನ್ನು ಪತ್ತೆ ಮಾಡಲು ಎಲ್ಲಾ ಸಂಸದರನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಕೋರಲಾಗುತ್ತದೆ. ಜನವರಿ 27 ರಿಂದ ಎರಡು ದಿನಗಳವರೆಗೆ ಸಂಸತ್ತಿನ ಆವರಣದಲ್ಲಿ ಪರೀಕ್ಷೆಯ ವ್ಯವಸ್ಥೆ ಮಾಡಲಾಗುವುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.