ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಂದು ಪ್ರಧಾನ್ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ಉತ್ತರಪ್ರದೇಶದ 6.1 ಲಕ್ಷ ಫಲಾನುಭವಿಗಳಿಗೆ ಸುಮಾರು 2,691 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಬಿಡುಗಡೆ ಮಾಡಿದರು.
ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ” ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ನಾವು ಪರಿಸ್ಥಿತಿಯನ್ನು ನೋಡಿದ್ದೇವೆ. ನಾನು ವಿಶೇಷವಾಗಿ ಉತ್ತರ ಪ್ರದೇಶದ ಬಗ್ಗೆ ಮಾತನಾಡುತ್ತಿದ್ದೇನೆ, ಮನೆ ನಿರ್ಮಿಸಲು ಸರ್ಕಾರವು ಸಹಾಯ ಮಾಡುತ್ತದೆ ಎಂದರೆ ಬಡವರು ನಂಬಲಿಲ್ಲ. ಹಿಂದಿನ ಆವಾಸ್ ಯೋಜನೆಗಳು, ಅವುಗಳ ಅಡಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಎಲ್ಲರಿಗೂ ತಿಳಿದಿದೆ ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
ಮೊದಲ ಕಂತನ್ನು 5.30 ಲಕ್ಷ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಮತ್ತು ಪಿಎಂಎವೈ-ಜಿ ಅಡಿಯಲ್ಲಿ ಮೊದಲ ಕಂತಿನ ಸಹಾಯವನ್ನು ಈಗಾಗಲೇ ಪಡೆದ 80,000 ಫಲಾನುಭವಿಗಳಿಗೆ ಎರಡನೇ ಕಂತು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.
ಎಲ್ಲರಿಗೂ ಮನೆಯನ್ನು ನೀಡುವುದು ಈ ಯೋಜನೆಯ ಗುರಿಯಾಗಿದೆ. ಈ ಯೋಜನೆಯಡಿ ದೇಶಾದ್ಯಂತ ಈಗಾಗಲೇ 1.26 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.