ನವದೆಹಲಿ: ಎಸ್-400 ವಾಯು ರಕ್ಷಣಾ ವ್ಯವಸ್ಥೆಯನ್ನು ಕಾರ್ಯಾಚರಿಸಲು ತರಬೇತಿಯನ್ನು ಪಡೆಯುವ ಸಲುವಾಗಿ ಭಾರತೀಯ ಮಿಲಿಟರಿ ಸಿಬ್ಬಂದಿಗಳ ತಂಡ ಇನ್ನು ಕೆಲವೇ ದಿನಗಳಲ್ಲಿ ರಷ್ಯಾಕ್ಕೆ ತೆರಳುತ್ತಿದ್ದಾರೆ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಈ ವರ್ಷದ ಕೊನೆಯಲ್ಲಿ ರಷ್ಯಾವು ಭಾರತಕ್ಕೆ ಮೊದಲ ಬ್ಯಾಚ್ನ ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಪೂರೈಕೆ ಮಾಡಲಿದೆ.
ರಷ್ಯಾದ ರಾಯಭಾರಿ ನಿಕೋಲಾಯ್ ಆರ್ ಕುಡಾಶೇವ್ ಅವರು ಮಂಗಳವಾರ ರಷ್ಯಾದ ರಾಯಭಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಮಾಸ್ಕೋಗೆ ತರಬೇತಿಗಾಗಿ ತೆರಳುತ್ತಿರುವ ತಂಡದೊಂದಿಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಅವರು, ಎಸ್ -400 ಪೂರೈಕೆಯು ಉಭಯ ದೇಶಗಳ ನಡುವಿನ ಮಿಲಿಟರಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಇಂಡೋ-ರಷ್ಯಾ ಮಿಲಿಟರಿ ಮತ್ತು ಮಿಲಿಟರಿ-ತಾಂತ್ರಿಕ ಸಂಬಂಧಗಳು ನಿರಂತರವಾಗಿ ಬೆಳೆಯುತ್ತಿರುವ ಅಸಾಧಾರಣ ಪರಸ್ಪರ ಹಿತಾಸಕ್ತಿ, ಬದ್ಧತೆ, ಸ್ಥಿರತೆ ಮತ್ತು ಪೂರಕತೆಯನ್ನು ಆಧರಿಸಿವೆ ಎಂದು ಅವರು ಹೇಳಿದರು.
ಅಕ್ಟೋಬರ್ 2018 ರಲ್ಲಿ, ಎಸ್ -400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಐದು ಘಟಕಗಳನ್ನು ಖರೀದಿಸಲು ಭಾರತ ರಷ್ಯಾದೊಂದಿಗೆ 5 ಬಿಲಿಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.