ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಕಮಲ ಹ್ಯಾರಿಸ್ ಅವರು ಇಂದು ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಿದ್ದಾರೆ.
ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಅಂದರೆ ಅಮೆರಿಕದಲ್ಲಿ ಮಧ್ಯಾಹ್ನ 12ರ ನಂತರ ಸಮಾರಂಭ ನಡೆಯಲಿದೆ.
ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಜೋ ಬೈಡನ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಕಮಲ ಹ್ಯಾರಿಸ್ ಅವರಿಗೆ ಅಲ್ಲಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಮೂಲಗಳ ಪ್ರಕಾರ, ತಮ್ಮ ಕುಟುಂಬದ 127 ವರ್ಷ ಹಳೆಯ ಬೈಬಲ್ ಮೇಲೆ ಬೈಡನ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಅಮೆರಿಕ ಕಾಲಮಾನ ಬೆಳಗ್ಗೆ 11 ಗಂಟೆಗೆ ಹೊಸ ಸರ್ಕಾರದ ಉದ್ಘಾಟನಾ ಸಮಾರಂಭ ಆರಂಭವಾಗಲಿದೆ. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.