ನವದೆಹಲಿ: ತನ್ನ ನೆರೆಹೊರೆ ಮೊದಲು ಎಂಬ ನೀತಿಗೆ ಬದ್ಧತೆಯನ್ನು ಪ್ರದರ್ಶಿಸುತ್ತಿರುವ ಭಾರತ, ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ತನ್ನ ಮಿತ್ರ ದೇಶಗಳಿಗೆ ನಿರಂತರವಾಗಿ ಸಹಾಯ ಮಾಡುತ್ತಾ ಬಂದಿದೆ. ಇದೀಗ ಲಸಿಕೆ ವಿಷಯದಲ್ಲೂ ಇದನ್ನು ಮುಂದುವರೆಸಿದೆ. ಬಾಂಗ್ಲಾದೇಶಕ್ಕೆ ಲಸಿಕೆ ಉಡುಗೊರೆ ನೀಡಲು ಭಾರತ ನಿರ್ಧರಿಸಿದೆ.
ವರದಿಗಳ ಪ್ರಕಾರ, ಭಾರತವು 2 ಮಿಲಿಯನ್ ಡೋಸ್ ಕೋವಿಡ್ -19 ಲಸಿಕೆಗಳನ್ನು ಬಾಂಗ್ಲಾದೇಶಕ್ಕೆ ಉಡುಗೊರೆಯಾಗಿ ನೀಡಲಿದೆ. ಲಸಿಕೆ ಗುರುವಾರ ಬಾಂಗ್ಲಾದೇಶಕ್ಕೆ ತಲುಪುವ ನಿರೀಕ್ಷೆಯಿದೆ. ಲಸಿಕೆಗಳನ್ನು ಭಾರತದಿಂದ ಸ್ವೀಕರಿಸಲು ಬಾಂಗ್ಲಾದೇಶದ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ಬಾಂಗ್ಲಾ ಒಪ್ಪಂದದಡಿ ಪಡೆಯುವ 30 ದಶಲಕ್ಷ ಡೋಸ್ಗಳಿಗೆ ಇದು ಹೆಚ್ಚುವರಿಯಾಗಿರುತ್ತದೆ. ಬೆಕ್ಸಿಮ್ಕೊ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ತ್ರಿಪಕ್ಷೀಯ ಒಪ್ಪಂದವನ್ನು ಮಾಡಲಾಗಿದ್ದು,ಇದರಡಿ ಬಾಂಗ್ಲಾ 30 ದಸಲಕ್ಷ ಡೋಸ್ ಲಸಿಕೆ ಪಡೆಯಲಿದೆ.
ಭಾರತ ಲಸಿಕೆ ಉಡುಗೊರೆಗಳೊಂದಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಬಾಂಗ್ಲಾದೇಶದ ಆರೋಗ್ಯ ಸಚಿವ ಜಾಹಿದ್ ಮಾಲೆಕ್ ಇಂದು ಢಾಕಾದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರತಿದಿನ ಸುಮಾರು 2 ಲಕ್ಷ ಜನರಿಗೆ ಲಸಿಕೆ ನೀಡಲಾಗುವುದು ಎಂದಿದ್ದಾರೆ. ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕಾಗಿ ಆರೋಗ್ಯ ಸಚಿವಾಲಯ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಆರೋಗ್ಯ ಕಾರ್ಯಕರ್ತರ 7 ಸಾವಿರಕ್ಕೂ ಹೆಚ್ಚು ತಂಡಗಳನ್ನು ದೇಶಾದ್ಯಂತ ನಿಯೋಜಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.