ಬೆಂಗಳೂರು: ಕಾಲೇಜು ಶಿಕ್ಷಣ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದಂತೆ 7,091 ಅತಿಥಿ ಉಪನ್ಯಾಸಕರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ರಾಜ್ಯ ಹಣಕಾಸು ಇಲಾಖೆಗೆ, ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಸಂಬಂಧಿಸಿದಂತೆ 14,183 ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ವಿನಂತಿಸಿಕೊಂಡ 50% ಗಳಷ್ಟು ಅತಿಥಿ ಉಪನ್ಯಾಸಕರ ನೇಮಕಕ್ಕೆ ಒಪ್ಪಿಗೆ ನೀಡಿತ್ತು.
ಅಲ್ಲದೆ ಮಾರ್ಚ್ ತಿಂಗಳಲ್ಲಿ ಕಾರ್ಯ ನಿರ್ವಹಿಸಿದ ಉಪನ್ಯಾಸಕರ ಸೇವೆಯನ್ನು ಮುಂದುವರಿಸಬೇಕು. ಕಾರ್ಯಭಾರಕ್ಕೆ ಅನುಗುಣವಾಗಿ ಉಪನ್ಯಾಸಕರ ಸಂಖ್ಯೆ ಕಡಿಮೆ ಮಾಡಬೇಕು. ಸೇವೆಯಲ್ಲಿ ಜೇಷ್ಠತೆಯನ್ನಾಧರಿಸಿಕೊಂಡು ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರಿಸಬೇಕು ಎಂದು ಹಣಕಾಸು ಇಲಾಖೆ ಸೂಚಿಸಿದೆ. 2021 ರ ಮಾರ್ಚ್ ವರೆಗೆ ಮಾತ್ರ ನೇಮಕ ಮಾಡಿಕೊಳ್ಳತಕ್ಕದ್ದು ಎಂದೂ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.