ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಡಾ. ಶ್ರೀ ಶಿವಕುಮಾರ ಶ್ರೀಗಳ ದ್ವಿತೀಯ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ, ಶ್ರೀಗಳು ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದವರು. ಅವರು ಪ್ರಾತಃ ಸ್ಮರಣೀಯರು. ಅನ್ನ ದಾಸೋಹದ ಜೊತೆಗೆ ಅಕ್ಷರ ದಾಸೋಹವನ್ನು ನಡೆಸುವ ಮೂಲಕ ಅದೆಷ್ಟೋ ಜನರ ಬಾಳು ಬೆಳಗಿದ್ದಾರೆ. ಅವರ ಪುಣ್ಯ ಸ್ಮರಣೆಯ ದಿನವನ್ನು ಸರ್ಕಾರದ ವತಿಯಿಂದ ‘ದಾಸೋಹ ದಿನ’ ವನ್ನಾಗಿ ಆಚರಣೆ ಮಾಡಲಾಗುವುದು. ಈ ಸಂಬಂಧ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಸ್ವಾಮೀಜಿಗಳ ಜೀವನ, ಸಾಧನೆಯನ್ನು ಜಗತ್ತಿಗೆ ಸಾರುವ ಸಲುವಾಗಿ ಸಿದ್ಧಗಂಗಾ ಶ್ರೀಗಳ ಹುಟ್ಟೂರಾದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರದಲ್ಲಿ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಮತ್ತು ವೀರಾಪುರ ಗ್ರಾಮದ ಅಭಿವೃದ್ಧಿಯ ಹಿನ್ನೆಲೆಯಲ್ಲಿ 25 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು. ಅಭಿವೃದ್ಧಿಯ ನೀಲನಕ್ಷೆಯನ್ನು ಸಹ ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.