ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 30 ರಂದು ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ಸರ್ಕಾರ ತನ್ನ ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಹೇಳಿದ್ದಾರೆ.
ಸಭೆ ವರ್ಚುವಲ್ ಆಗಿ ನಡೆಯಲಿದೆ ಮತ್ತು ಎಲ್ಲಾ ಪಕ್ಷಗಳ ಮುಖಂಡರಿಗೆ ಆಹ್ವಾನವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಂಸತ್ತಿನ ಪ್ರತಿ ಅಧಿವೇಶನ ಪ್ರಾರಂಭವಾಗುವ ಮೊದಲು ಅದರ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸರ್ವಪಕ್ಷ ಸಭೆ ನಡೆಸುವುದು ಒಂದು ವಾಡಿಕೆಯ ಕಾರ್ಯವಿಧಾನವಾಗಿದೆ. ಆದರೆ ಈ ಬಾರಿ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ನಂತರ ಸರ್ವಪಕ್ಷ ಸಬೆ ನಡೆಯಲಿದೆ.
ಜನವರಿ 29 ರಂದು ಅಧಿವೇಶನ ಪ್ರಾರಂಭವಾಗಲಿದೆ, ಅದರ ಒಂದು ದಿನದ ನಂತರ ಅಂದರೆ ಜನವರಿ 30ರಂದು ಸಭೆ ನಡೆಯಲಿದೆ.
ಸಂಸತ್ತಿನ ಬಜೆಟ್ ಅಧಿವೇಶನ ಎರಡು ಹಂತಗಳಲ್ಲಿ ನಡೆಯಲಿದೆ.
ಮೊದಲ ಭಾಗ ಫೆಬ್ರವರಿ 15 ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಭಾಗ ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.