ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ‘ಹಳ್ಳಿಗೆ ನಡೆಯಿರಿ ಜಿಲ್ಲಾಧಿಕಾರಿಗಳೇ’ ಕಾರ್ಯಕ್ರಮವನ್ನು ಪುನರಾರಂಭ ಮಾಡಲಾಗುತ್ತಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯವನ್ನು ಕಡ್ಡಾಯಗೊಳಿಸಲಾಗಿದೆ. ಹಳ್ಳಿಯ ಜನರ ಸಮಸ್ಯೆ, ಸಂಕಷ್ಟಗಳನ್ನು ಆಲಿಸುವ ನಿಟ್ಟಿನಲ್ಲಿ, ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆ. 3 ರಿಂದ 5 ರ ವರೆಗೆ ನಡೆಯಲಿರುವ ಏರೋ ಇಂಡಿಯಾ- 2021 ರ ಬಗ್ಗೆ ಮಾತನಾಡಿದ ಅವರು, ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಜನರಿಗೆ ಈ ಏರ್ ಶೋ ದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿಲ್ಲ. ಈ ಶೋ ದಲ್ಲಿ 14 ರಾಷ್ಟ್ರಗಳ 551 ಪ್ರದರ್ಶನ ಕೇಂದ್ರ ಮತ್ತು 61 ವಿಮಾನಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಭದ್ರತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.