ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಶಾಲಾರಂಭ ವಿಳಂಬವಾಗಿದೆ. ಇದೀಗ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಟ ಹಾಜರಾತಿಯ ನಿಯಮದಿಂದ ವಿನಾಯಿತಿ ನೀಡಿದೆ.
ಈ ಬಾರಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಿಂದಿನ ವರ್ಷಗಳಂತೆ ಕನಿಷ್ಟ ಹಾಜರಾತಿಯನ್ನು ಹೊಂದಿರಬೇಕಿಲ್ಲ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಇದರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿಸ್ತೃತವಾಗಿ ವಿಚಾರಗಳನ್ನು ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ಮಂಡಳಿಯ ಕಾಯ್ದೆ 1966 ನಿಯಮ 37 ರ ಅನ್ವಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 75% ಹಾಜರಾತಿ ಇರುವುದು ಕಡ್ಡಾಯವಾಗಿದೆ. ಆದರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ತರಗತಿಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಹಾಜರಾತಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.