ಬೆಂಗಳೂರು: ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿನ ಕೆಲಸಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನಾ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸರ ಜೊತೆಗೆ ಸಮಾಲೋಚನ ಸಭೆ ನಡೆಸಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.
ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಣೆ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಸಭೆಯಲ್ಲಿ ಭಾಗವಹಿಸಿದ್ದವರು ಸಚಿವರ ಗಮನಕ್ಕೆ ತಂದಿದ್ದು, ಇದಕ್ಕೆ ಪರಿಹಾರವಾಗಿ ಇಲಾಖೆಯ ಕಾರ್ಯಗಳಲ್ಲಿ ಕ್ಷಿಪ್ರ ಪ್ರಗತಿಯಾಗುವಂತೆ ಮಾಡಲು ಸಕಾಲ ಯೋಜನಾ ವ್ಯಾಪ್ತಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಇರುವ ಕಾಯ್ದೆಯಡಿ ನಿಯಮಗಳನ್ನು ರೂಪಿಸುವ ಕೆಲಸವಾಗುತ್ತಿದೆ. ಈ ಪ್ರಕ್ರಿಯೆ ಸಂಪೂರ್ಣವಾದ ಬಳಿಕ ವರ್ಗಾವಣೆ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬಾಕಿ ಇರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.