ನವದೆಹಲಿ: ಕೊರೋನಾವೈರಸ್ ವಿರುದ್ಧ ಭಾರತವು ತನ್ನ ಒಂದು ಮಿಲಿಯನ್ಗೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಿದ ಮಹತ್ವದ ಮೈಲಿಗಲ್ಲನ್ನು ದಾಟಿದೆ. ಗುರುವಾರವಷ್ಟೇ 2.33 ಲಕ್ಷಕ್ಕೂ ಅಧಿಕ ಮಂದಿ ಡೋಸ್ಗಳನ್ನು ಪಡೆದಿದ್ದಾರೆ.
ದೇಶದಲ್ಲಿ ಈವರೆಗೆ 10,40,014 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ನಲ್ಲಿ ತಿಳಿಸಿದೆ.
ಜನವರಿ 16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪ್ರಾರಂಭಿಸಿದ್ದರು. ಗುರುವಾರ ವರದಿಯಾದ ವ್ಯಾಕ್ಸಿನೇಷನ್ ಸಂಖ್ಯೆ ಒಂದೇ ದಿನದಲ್ಲಿ ಅತಿ ಹೆಚ್ಚು. ಜನವರಿ 16 ರ ಮೊದಲ ದಿನದಂದು ನೀಡಲಾದ ಎರಡು ಲಕ್ಷ ಡೋಸ್ಕ್ಕಿಂತ ಗುರುವಾರ ಹೆಚ್ಚಿನ ಲಸಿಕೆ ನೀಡಲಾಗಿದೆ.
ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯವು ಸಂಗ್ರಹಿಸಿದ ದತ್ತಾಂಶವು, ಭಾರತವು ಈಗ ಮಿಲಿಯನ್ ಗಡಿ ದಾಟಿದ ವೇಗದ ದೇಶವಾಗಿದೆ ಎಂಬುದನ್ನು ತೋರಿಸಿದೆ, ಮಿಲಿಯನ್ ಗಡಿ ದಾಟಲು ಯುನೈಟೆಡ್ ಸ್ಟೇಟ್ಸ್ ಒಂಬತ್ತು ದಿನ ತೆಗೆದುಕೊಂಡಿತ್ತು, ಇದಕ್ಕೆ ಹೋಲಿಸಿದರೆ ಕೇವಲ ಆರು ದಿನಗಳನ್ನು ಭಾರತ ತೆಗೆದುಕೊಂಡಿದೆ.
ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಲಸಿಕೆ ನೀಡುವ ಕೇಂದ್ರಗಳನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.