ವಾಷಿಂಗ್ಟನ್: ಅಮೆರಿಕದ 46 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿರುವ ಅಧ್ಯಕ್ಷ ಜೋ ಬೈಡನ್ ಅವರು ಭಾರತ- ಅಮೆರಿಕ ನಡುವಿನ ಉಭಯಪಕ್ಷೀಯ ಯಶಸ್ವಿ ಸಂಬಂಧವನ್ನು ಗೌರವಿಸುತ್ತಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಮ್ಮ ದೈನಂದಿನ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಹೇಳಿದ್ದಾರೆ.
“ಅಧ್ಯಕ್ಷ ಬೈಡೆನ್ ಅವರು ಭಾರತಕ್ಕೆ ಅನೇಕ ಬಾರಿ ಭೇಟಿ ನೀಡಿದ್ದಾರೆ. ಅವರು ಭಾರತ ಮತ್ತು ಅಮೆರಿಕ ನಾಯಕರ ನಡುವಿನ ಉಭಯಪಕ್ಷೀಯ ಯಶಸ್ವಿ ಸಂಬಂಧವನ್ನು ಗೌರವಿಸುತ್ತಾರೆ ಮತ್ತು ಮೌಲ್ಯೀಕರಿಸುತ್ತಾರೆ. ಅದನ್ನು ಮುಂದುವರೆಸಲು ಎದುರು ನೋಡುತ್ತಿದ್ದಾರೆ” ಎಂದು ಭಾರತ-ಯುಎಸ್ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಸಂದರ್ಭದಲ್ಲಿ ಅವರು ಹೇಳಿದ್ದಾರೆ.
ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಐತಿಹಾಸಿಕ ಉಪಾಧ್ಯಕ್ಷೆ ಸ್ಥಾನವನ್ನು ಅಲಂಕರಿಸಿದ್ದು, ಈ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.
“ಹ್ಯಾರಿಸ್ ಅಮೆರಿಕ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿರುವ ಮೊದಲ ಭಾರತೀಯ ಅಮೆರಿಕನ್ ಆಗಿದ್ದಾರೆ. ಈಗಾಗಲೇ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಖಂಡಿತವಾಗಿಯೂ ಇದು ಈ ದೇಶದಲ್ಲಿ ನಮ್ಮೆಲ್ಲರಿಗೂ ಐತಿಹಾಸಿಕ ಕ್ಷಣವಾಗಿದೆ. ಅಲ್ಲದೇ, ನಮ್ಮ ಸಂಬಂಧದ ಮಹತ್ವವನ್ನು ಮತ್ತಷ್ಟು ದೃಢಪಡಿಸಿದೆ” ಸಾಕಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.