ಶಿವಮೊಗ್ಗ: ನಗರದ ಹುಣಸೋಡು ಬಳಿಯ ಕಲ್ಲುಗಣಿಗಾರಿಕೆಯಲ್ಲಿ ನಿನ್ನೆ ರಾತ್ರಿ ಡೈನಾಮೇಟ್ ಸ್ಫೋಟಗೊಂಡು ಹಲವರು ಮೃತಪಟ್ಟಿದ್ದಾರೆ. ಈ ಸಂಬಂಧ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಈ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳುವಂತಾಗಲಿ ಎಂದು ಹೇಳಿದ್ದಾರೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಈ ದುರಂತಕ್ಕೆ ಪ್ರಧಾನಿ ಮೋದಿ ಅವರೂ ಸಂತಾಪ ಸೂಚಿಸಿದ್ದು, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಸಂಪೂರ್ಣ ನೆರವನ್ನು ನೀಡಲಿದೆ ಎಂದು ಮೋದಿ ತಿಳಿಸಿದ್ದಾರೆ.
ಇನ್ನು ಈ ಸ್ಫೋಟದ ಶಬ್ಧ ಕ್ಷಣಕಾಲ ಆಸುಪಾಸಿನ ಹಲವು ಪ್ರದೇಶಗಳ ಜನರನ್ನು ಆತಂಕಕ್ಕೀಡು ಮಾಡಿತ್ತು.
Pained by the loss of lives in Shivamogga. Condolences to the bereaved families. Praying that the injured recover soon. The State Government is providing all possible assistance to the affected: PM @narendramodi
— PMO India (@PMOIndia) January 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.