ಮಂಗಳೂರು: ಬಹುಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಕೈಗೂಡುತ್ತಿದೆ. ಕಳೆದ 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಪುಣ್ಯ ಕೈಂಕರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕವಿಗಳ ಮನಸ್ಸಿನಲ್ಲಿರುವ ರಾಮಭಕ್ತಿಯನ್ನು ಅಕ್ಷರ ರೂಪಕ್ಕಿಳಿಸುವ ನಿಟ್ಟಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಕವಿಗೋಷ್ಠಿಯನ್ನು ಆಯೋಜನೆ ಮಾಡಿದೆ.
ಈ ಕವಿಗೋಷ್ಠಿ ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಜಿಲ್ಲಾ ಮಟ್ಟದ ಕವಿತೆ ರಚನೆ ಮತ್ತು ವಾಚನ ಸ್ಪರ್ಧೆ, ಎರಡನೇ ಹಂತದಲ್ಲಿ ವಿಭಾಗ ಮಟ್ಟದಲ್ಲಿ ಮತ್ತು ಮೂರನೇ ರಾಜ್ಯ ಮಟ್ಟದಲ್ಲಿ ನಡೆಯಲಿದೆ. ಅಂತಿಮ ಸುತ್ತಿನಲ್ಲಿ ಆಯ್ಕೆಯಾಗುವ 50 ಕವನಗಳನ್ನು ಸಂಕಲನ ರೂಪದಲ್ಲಿ ಹೊರ ತರಲಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ ಏಳು ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಪರಿಷತ್ ಅಧ್ಯಕ್ಷ ಡಾ. ಚ. ನ. ಶಂಕರ್ ರಾವ್ ತಿಳಿಸಿದ್ದಾರೆ.
‘ಅಯೋಧ್ಯೆಯಲ್ಲಿ ರಾಮ ಮಂದಿರ, ಹೃದಯದಲ್ಲಿ ರಾಮ ಚಂದಿರ’ ಕವನಗಳ ವಿಷಯವಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಜ. 29 ರೊಳಗಾಗಿ ಸ್ವ-ರಚಿತ ಕವನಗಳನ್ನು abspmangaluru@gmail.com, ವಾಟ್ಸ್ಯಾಪ್ ಸಂಖ್ಯೆ 9900662500 ಕಳುಹಿಸುವಂತೆ ಆಯೋಜಕರು ವಿನಂತಿಸಿದ್ದಾರೆ. ಆಯ್ದ ಕವನಗಳನ್ನು ಗೋಷ್ಟಿಯಲ್ಲಿ ಓದಲು ಅವಕಾಶ ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಹಂತದ ಕವನ ರಚನೆ ಮತ್ತು ವಾಚನ ಜ. 31 ರಂದು ಮಂಗಳೂರಿನ ಎಸ್ಡಿಎಂ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರಿಷತ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.