ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಜ. 23 ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದು, ಅಲ್ಲಿಂದ 10.50 ರ ವೇಳೆಗೆ ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಜೆಪಿ ನಗರದ ಶರಣ ವೇದಿಕೆ ವತಿಯಿಂದ ನಡೆಯಲಿರುವ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅದಾದ ಬಳಿಕ ಮಹರ್ಷಿ ಶಾಲೆ ಮತ್ತು ಡಿವಿಎ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಲಿದ್ದಾರೆ. ಆ ಬಳಿಕ ವಿಜಯ ನಗರದಲ್ಲಿ ಬಸವ ಭವನ ಉದ್ಘಾಟನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.