ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹೊಡೆತ ಬಿದ್ದಿದೆ, ಅರಣ್ಯ ಸಚಿವ ರಾಜೀಬ್ ಬ್ಯಾನರ್ಜಿ ಅವರು ಶುಕ್ರವಾರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
“ಸಂಪುಟ ಸಚಿವ ಸ್ಥಾನಕ್ಕೆ ಇಂದು ಅಂದರೆ 2021 ಜನವರಿ 22 ರಂದು ರಾಜೀನಾಮೆ ನೀಡಿದ್ದೇನೆ ಎಂದು ನಿಮಗೆ ತಿಳಿಸಲು ವಿಷಾದಿಸುತ್ತೇನೆ” ಎಂದು ರಾಜೀಬ್ ಬ್ಯಾನರ್ಜಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಇತ್ತೀಚೆಗೆ, ಸಾರಿಗೆ ಸಚಿವ ಸುವೇಂದು ಅಧಿಕಾರಿ ಮತ್ತು ಕ್ರೀಡಾ ರಾಜ್ಯ ಸಚಿವ ಲಕ್ಷ್ಮೀರತನ್ ಶುಕ್ಲಾ ಅವರು ಸರ್ಕಾರ ಮತ್ತು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು.
ಜನವರಿ 16 ರಂದು ಹೌರಾ ಜಿಲ್ಲೆಯ ಟಿಎಂಸಿ ದಿಗ್ಗಜ ರಾಜೀಬ್ ಬ್ಯಾನರ್ಜಿ, ಪಕ್ಷದ ಕೆಲವರು ತಳಮಟ್ಟದ ಕಾರ್ಮಿಕರ, ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನನ್ನ ‘ಮಿಷನ್’ಗೆ ಅಡ್ಡಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಅವರು ರಾಜೀನಾಮೆ ನೀಡಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಸುವೇಂಡು ಅಧಿಕಾರಿ ಸೇರಿದಂತೆ 12 ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.