ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ|| ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿಯ ಸಭೆಯು ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಈ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರ ಆಯ್ಕೆ ನಡೆದಿದೆ.
ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಹಲವಾರು ಸಾಹಿತಿಗಳ ಹೆಸರುಗಳು ಚರ್ಚೆಗೆ ಬಂದಿದ್ದವು. ಸಭೆಯಲ್ಲಿ ಸರ್ವಾನುಮತದಿಂದ ಸಾಹಿತಿ ಡಾ||ದೊಡ್ಡರಂಗೇಗೌಡರ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ಮನು ಬಳಿಗಾರ್ ತಿಳಿಸಿದ್ದಾರೆ. ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.