ಬೆಂಗಳೂರು: ನಗರದಲ್ಲಿ ಇಸ್ಕಾನ್ ಆಯೋಜನೆ ಮಾಡಿದ್ದ ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ, ಪ್ರಸ್ತುತ ಬೆಂಗಳೂರಿನಲ್ಲಿರುವ ಐದು ವರ್ಷ ಹತ್ತು ತಿಂಗಳಿನ ಗಹನಾ ಮಾನಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯನ್ನು 6 ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 370 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಅತ್ಯಂತ ಕಿರಿಯ ವಯಸ್ಸಿನ ಗಹನಾ ಮಾನಸಿ ಮೊದಲ ಸ್ಥಾನ ಗಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಗವದ್ಗೀತೆಯ 9ನೇ ಅಧ್ಯಾಯದ ಶ್ಲೋಕವೊಂದನ್ನು ನಿಗದಿ ಮಾಡಲಾಗಿತ್ತು. ಶ್ಲೋಕ ಪೂರ್ಣಗೊಳಿಸಲು ಸಮಯದ ಮಿತಿಯನ್ನು ಸಹ ನೀಡಲಾಗಿತ್ತು. ಗಹನಾ ನಿಗದಿತ ಸಮಯದೊಳಗೆ ಯಾವುದೇ ತಡವರಿಕೆ ಇಲ್ಲದೆ ಶ್ಲೋಕವನ್ನು ಪೂರ್ಣಗೊಳಿಸಿದ್ದು, ಆ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ.
ಗಹನಾ ಮಾನಸಿ ಅವರು ಬೆಳ್ಳಂಪಳ್ಳಿ ನಿವಾಸಿ ಶ್ವೇತಾ ಮತ್ತು ಮಧುರ್ ರಾಜ್ ಶೆಟ್ಟಿಗಾರ್ ಅವರ ಪುತ್ರಿ. ಬೆಂಗಳೂರಿನ ಶಾಲೆಯೊಂದರಲ್ಲಿ ಯುಕೆಜಿ ಓದುತ್ತಿದ್ದಾರೆ. ಈ ಪುಟಾಣಿ ಶೈಕ್ಷಣಿಕ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.