ನವದೆಹಲಿ: ಅಹಮದಾಬಾದ್ನ ಸನಂದ್ ಬಳಿಯ ವಿರೋಚನ್ ನಗರದಲ್ಲಿ ಭಾರತದ ಅತಿದೊಡ್ಡ ಬಹು-ಮಾದರಿ ಲಾಜಿಸ್ಟಿಕ್ಸ್ ಪಾರ್ಕ್ ಸ್ಥಾಪಿಸಲು ಗುಜರಾತ್ ಸರ್ಕಾರ ಅದಾನಿ ಪೋರ್ಟ್ಸ್ ಮತ್ತು ಎಸ್ಇಝಡ್ ಲಿಮಿಟೆಡ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
1,450 ಎಕರೆ ಪ್ರದೇಶದಲ್ಲಿ ವ್ಯಾಪಿಸಲಿರುವ ಈ ಪಾರ್ಕ್ 50,000 ಕೋಟಿ ರೂ. ಗಳ ಹೂಡಿಕೆಯನ್ನು ಆಕರ್ಷಿಸಲಿದ್ದು, 25 ಸಾವಿರ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗವನ್ನು ಒದಗಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಕೈಗಾರಿಕಾ ಮತ್ತು ಗಣಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಕೆ. ದಾಸ್ ಮತ್ತು ಅದಾನಿ ಪೋರ್ಟ್ಸ್ ಮತ್ತು ಸೆಜ್ ಲಿಮಿಟೆಡ್ ಸಿಇಒ ಕರಣ್ ಅದಾನಿ ಅವರು ಸಿಎಂ ವಿಜಯ್ ರೂಪಾನಿ ಅವರ ಸಮ್ಮುಖದಲ್ಲಿ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡರು.
“ಈ ಉದ್ಯಾನವನ್ನು ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಮತ್ತು ಎಲ್ಲಾ ಪ್ರಮುಖ ಬಂದರುಗಳೊಂದಿಗೆ ನೇರವಾಗಿ ಸಂಪರ್ಕಿಸಲಾಗುವುದು. ಇದು ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮನಿರ್ಭರ ಭಾರತ’ ದೃಷ್ಟಿಗೆ ಅನುಗುಣವಾಗಿದೆ ಮತ್ತು ಗುಜರಾತ್ನಲ್ಲಿ ವ್ಯವಹಾರಗಳನ್ನು ಜಾಗತಿಕವಾಗಿ ಹೆಚ್ಚು ಸ್ಪರ್ಧಾತ್ಮಕವಾಗಿಸುತ್ತದೆ” ಎಂದು ಪ್ರಕಟನೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.