ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲು ಅನುಮತಿ ಇಲ್ಲ. ಪರವಾನಗಿ ಹೊಂದಿದ್ದರೆ ಮಾತ್ರವೇ ಗಣಿಗಾರಿಕೆ ನಡೆಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಶಿವಮೊಗ್ಗದ ಹುಣಸೋಡು ಪ್ರದೇಶದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಇಪ್ಪತ್ತನಾಲ್ಕು ಗಂಟೆಗಳಲ್ಲಿಯೇ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದಿರುವ ದುರಂತದ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದಲೂ ಪೂರಕ ಮಾಹಿತಿಯನ್ನು ಸರ್ಕಾರ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಲಾರಿಯಲ್ಲಿ ಜಿಲೆಟಿನ್ ತರುವುದಕ್ಕೆ ಅವಕಾಶ ನೀಡಿದವರಾರು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದಾಗಿ ಅವರು ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಮೃತಪಟ್ಟ 5 ಜನರ ಗುರುತು ಪತ್ತೆಯಾಗಿದೆ. ನಿನ್ನೆ ಮೂರು ಶವಗಳ ಗುರುತು ಪತ್ತೆ ಹಚ್ಚಲಾಗಿತ್ತು. ಇಂದು ಮತ್ತೆರಡು ಶವಗಳ ಗುರುತು ಪತ್ತೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮೃತರನ್ನು ಅಂತರಗಂಗೆ ಮತ್ತು ಆಂಧ್ರ ಮೂಲದವರಾಗಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.