ನವದೆಹಲಿ: ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯ ನೆನಪಿಗಾಗಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇತಾಜಿ ಅವರ ಭಾವಚಿತ್ರವನ್ನು ಶನಿವಾರ ಅನಾವರಣಗೊಳಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
1897 ರಲ್ಲಿ ಈ ದಿನ ಜನಿಸಿದ ಬೋಸ್ ಅವರ ಜನ್ಮದಿನಾಚರಣೆಯ ನೆನಪಿಗಾಗಿ ಜನವರಿ 23 ಅನ್ನು “ಪರಾಕ್ರಮ್ ದಿವಸ್” ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.
“ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು (ಜನವರಿ 23, 2021) ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದರು. ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ವರ್ಷಪೂರ್ತಿ ಆಚರಣೆಗಳ ಆರಂಭವನ್ನು ಗುರುತಿಸುವುದು ಈ ಅನಾವರಣದ ಉದ್ದೇಶವಾಗಿತ್ತು” ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.