ನವದೆಹಲಿ: ದೇಶದಲ್ಲಿ ಇಂದು 11ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಮತದಾರರನ್ನು ಸಬಲೀಕರಣಗೊಳಿಸುವುದು, ಮತದಾನದ ಬಗ್ಗೆ ಜಾಗೃತಿ,, ಸುರಕ್ಷತೆ ಮತ್ತು ಮಾಹಿತಿ ನೀಡುವುದು ಈ ವರ್ಷದ ದಿನಾಚರಣೆಯ ಗುರಿಯಾಗಿದೆ.
ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸುತ್ತಿರುವ ರಾಷ್ಟ್ರಮಟ್ಟದ ಪ್ರಮುಖ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಭವನದಿಂದ ರಾಷ್ಟ್ರಪತಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಕೇಂದ್ರ ಕಾನೂನು ಮತ್ತು ನ್ಯಾಯ, ದೂರ ಸಂಪರ್ಕ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಟ್ವಿಟ್ ಮಾಡಿರುವ ಮೋದಿ, “ರಾಷ್ಟ್ರೀಯ ಮತದಾರರ ದಿನಾಚರಣೆಯು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತ್ತು ಚುನಾವಣೆಗಳ ಸುಗಮ ನಡೆಯುವಿಕೆಯನ್ನು ಖಚಿತಪಡಿಸಿಕೊಳ್ಳುವಲ್ಲಿನ ಚುನಾವಣಾ ಅಯೋಗದ ಗಮನಾರ್ಹ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭವಾಗಿದೆ. ಮತದಾರರ ನೋಂದಣಿಯನ್ನು ಖಾತರಿಪಡಿಸುವ ಅಗತ್ಯತೆಯ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವ ದಿನ ಇದಾಗಿದೆ” ಎಂದಿದ್ದಾರೆ.
National Voters Day is an occasion to appreciate the remarkable contribution of the EC to strengthen our democratic fabric and ensure smooth conduct of elections. This is also a day to spread awareness on the need of ensuring voter registration, particularly among the youth.
— Narendra Modi (@narendramodi) January 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.