ಮೈಸೂರು : ಈ ವರ್ಷ ನಡೆಯಲಿರುವ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಪ್ರತಿಷ್ಠಿತ ‘ಸರಸ್ವತಿ ಸಮ್ಮಾನ್’ ಪ್ರಶಸ್ತಿ ಪುರಸ್ಕೃತ ಕನ್ನಡಿಗ, ಖ್ಯಾತ ಸಾಹಿತಿಗಳೂ ಆದ ಡಾ. ಎಸ್.ಎಲ್ ಭೈರಪ್ಪ ಅವರನ್ನು ಆಹ್ವಾನಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
‘ಕಳೆದ ಬಾರಿ ನಡೆದ ಸಭೆಯಲ್ಲಿ ನಾನು ಡಾ. ಎಸ್. ಎಲ್. ಭೈರಪ್ಪನವರ ಹೆಸರನ್ನು ಸೂಚಿಸಿದ್ದೆ. ಆದರೆ ಅವರನ್ನು ಮುಂದಿನ ಬಾರಿ ಕರೆಯೋಣ ಎಂದು ತಿಳಿಸಿದ್ದಿರಿ. ಈ ಬಾರಿ ಆಗಸ್ಟ್ 10 ರಂದು ನಡೆಯಲಿರುವ ದಸರಾ ಹಬ್ಬದ ಪೂರ್ವ ಭಾವಿ ಸಭೆಯಲ್ಲಿ ನನಗೆ ಭಾಗವಹಿಸಲು ಸಾಧ್ಯವಾಗದ ಕಾರಣ, ನೀವು ಡಾ. ಎಸ್. ಎಲ್. ಭೈರಪ್ಪನವರನ್ನೇ ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ಇದು ಕರ್ನಾಟಕದ ಬಹು ಜನರ ಅಭಿಪ್ರಾಯ ಕೂಡ. ಏಕೆಂದರೆ ಡಾ. ಎಸ್. ಎಲ್. ಭೈರಪ್ಪನವರು ಕನ್ನಡ ಸಾಹಿತ್ಯವನ್ನು ಹೊರನಾಡಿಗೂ ತಲುಪಿಸಿದವರು. ಕನ್ನಡ ಸಾಹಿತ್ಯ ಲೋಕವನ್ನು ವಿಶ್ವಮಾನ್ಯ ಮಾಡಿದವರಲ್ಲಿ ಮಾನ್ಯ ಭೈರಪ್ಪನವರೂ ಸೇರಿದ್ದಾರೆ. ಕನ್ನಡಕ್ಕೆ ಅವರ ಕೊಡುಗೆ ಅಪಾರ. ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಯೂ ಆಗಿರುವ ಎಸ್. ಎಲ್. ಭೈರಪ್ಪನವರನ್ನು ಉದ್ಘಾಟನೆಗೆ ಆಮಂತ್ರಿಸುವುದು ಬಹಳ ಸೂಕ್ತ. ಆವರಿಗೆ ಮೈಸೂರಿನ ಮೇಲೆ ಅಪಾರ ಗೌರವ. ಹಾಗಾಗಿ ಡಾ. ಎಸ್. ಎಲ್. ಭೈರಪ್ಪ ಅವರನ್ನು ದಸರಾ ಉದ್ಘಾಟಕರಾಗಿ ಆಹ್ವಾನಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.’ ಎಂದು ಪತ್ರದಲ್ಲಿ ಬರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.