ಬೆಂಗಳೂರು: ದೇಶಕ್ಕಿಂದು 72 ನೇ ಗಣರಾಜ್ಯೋತ್ಸವದ ಸಂಭ್ರಮ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ನಮ್ಮ ಬಲಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ, ಅನನ್ಯತೆಯನ್ನು ಎತ್ತಿ ಹಿಡಿಯೋಣ ಎಂದು ತಿಳಿಸಿದ್ದಾರೆ.
ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ರಾಜ್ಯದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು ಸರ್ಕಾರ ಮುಂದಾಗಿದೆ. ಈ ಸಂದರ್ಭದಲ್ಲಿ ಕೇವಲ ಪಾಸ್ ಇದ್ದವರಿಗಷ್ಟೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ.#ಗಣರಾಜ್ಯೋತ್ಸವ pic.twitter.com/3Hkm4OjPw9
— B.S. Yediyurappa (@BSYBJP) January 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.