ನವದೆಹಲಿ: ಇಂದು ದೇಶ 72ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಕೂಡ ವಿಶೇಷವಾದ ಡೂಡಲ್ ಮೂಲಕ ಭಾರತದ ಗಣರಾಜ್ಯೋತ್ಸವಕ್ಕೆ ಶುಭಾಶಯವನ್ನು ಕೋರಿದೆ.
ಡೂಡಲ್ನಲ್ಲಿ ಇಂದು ಭಾರತದ ಕಲೆ, ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಅತ್ಯಂತ ಆಕರ್ಷಕವಾಗಿ ಪ್ರತಿಬಿಂಬಿಸಲಾಗಿದೆ.
ಕೆಂಪು ಕೋಟೆ ಸೇರಿದಂತೆ ಐತಿಹಾಸಿಕ ಕಟ್ಟಡ, ಕೇಸರಿ, ಬಿಳಿ ಮತ್ತು ಹಸಿರು ಬಣ್ಣದ ಮುಂಭಾಗದಲ್ಲಿ ದೇಶದ ಸಂಸ್ಕೃತಿಯ ಜನರನ್ನು ಪ್ರದರ್ಶಿಸಿದೆ. ಇದರ ಮಧ್ಯೆ ನೀಲಿ ಬಣ್ಣದಲ್ಲಿ ಗೂಗಲ್ ಹೆಸರನ್ನು ಮೂಡಿಸಲಾಗಿದೆ.
ಮುಂಬೈ ಮೂಲದ ಅತಿಥಿ ಕಲಾವಿದ ಓಂಕಾರ್ ಫೋಂಡೇಕರ್ ಇಂದಿನ ಡೂಡಲ್ ರಚಿಸಿದ್ದಾರೆ ಎಂದು ಗೂಗಲ್ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.