ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, ಈ ಬಾರಿ ಕೊರೋನಾ ಸಂಕಷ್ಟದ ನಡುವೆಯೇ ಗಣರಾಜ್ಯೋತ್ಸವ ಆಚರಣೆ ನಡೆದಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವೂ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಗಲಿರುಳು ಅವಿರತವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು. ಹಾಗೆಯೇ ಮೋದಿ ಅವರ ಕನಸಿನಂತೆ ದೇಶ ಆತ್ಮನಿರ್ಭರವಾಗುವತ್ತ ಮಹತ್ವದ ಹೆಜ್ಜೆಗಳನ್ನಿರಿಸುತ್ತಿದೆ ಎಂದು ಅವರು ತಿಳಿಸಿದರು.
ಕೊರೋನಾ ಸಂದರ್ಭದಲ್ಲಿ ದೇಶ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದೆ. ರಾಜ್ಯವೂ ಸಹ ದೇಶದ ನಂತರ ರಾಜ್ಯಗಳಿಗೆ ಮಾದರಿಯಾಗುವಂತೆ ಕೊರೋನಾ ನಿಯಂತ್ರಣಕ್ಕೆ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯಪಾಲರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಅವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.