ಪ್ರಯಾಗರಾಜ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಅನೇಕ ಜನರು ಕೊಡುಗೆ ನೀಡುವಲ್ಲಿ ನಿರತರಾಗಿದ್ದಾರೆ. ಈ ಪಟ್ಟಿಯನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಸೇರಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಅವರು ಇತ್ತೀಚೆಗೆ ತಮ್ಮ 30 ತಿಂಗಳ ಸಂಬಳವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ವರದಿಗಳ ಪ್ರಕಾರ, ಈ ಮೊತ್ತವನ್ನು ಕಳೆದ ಶನಿವಾರ ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಸದಸ್ಯ ಸ್ವಾಮಿ ವಾಸುದೇವಾನಂದ ಸರಸ್ವತಿಗೆ ಹಸ್ತಾಂತರಿಸಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವ್ ಪ್ರಸಾದ್ ಮೌರ್ಯ, “ನಾನು ಮೊದಲು ರಾಮ ಭಕ್ತ, ನಂತರ ನಾನು ರಾಜ್ಯದ ಉಪಮುಖ್ಯಮಂತ್ರಿ” ಎಂದಿದ್ದಾರೆ. ರಾಜ್ಯದ ಪಿಡಬ್ಲ್ಯುಡಿ ನೌಕರರ ಪರವಾಗಿ ರಾಮ ಮಂದಿರ ನಿರ್ಮಾಣಕ್ಕಾಗಿ ಮೌರ್ಯ ಅವರು ರೂ.1.10 ಕೋಟಿ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರ ಮಾಡಿದ್ದಾರೆ.
ಕಳೆದ ಗುರುವಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಹಾರ್ ಮತ್ತು ಅವರ ಪತ್ನಿ ಐದು ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದರು. ಇವುಗಳಲ್ಲದೆ, ಅನೇಕ ದೊಡ್ಡ ಅನುಭವಿ ನಾಯಕರು ಕೂಡ ದೇಣಿಗೆ ನೀಡಿದ್ದಾರೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.