ಬೆಂಗಳೂರು: ಸಮಗ್ರ ವೈದ್ಯಕೀಯ ಸೇವೆಯ ಮಾಹಿತಿಯನ್ನು ಒಂದೇ ಸಹಾಯವಾಣಿಯಡಿಯಲ್ಲಿ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಸಹಾಯವಾಣಿ 104 ಮತ್ತು ಆರೋಗ್ಯ ಕವಚ 108 ಅನ್ನು ವಿಲೀನಗೊಳಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.
ಪ್ರಸ್ತುತ 108 ನಲ್ಲಿ ಆಂಬ್ಯುಲೆನ್ಸ್ ಸೇವೆ ಮತ್ತು 104 ನಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸೇವೆ ಮತ್ತು ಸೌಲಭ್ಯಗಳ ಮಾಹಿತಿಯನ್ನು ನೀಡಲಾಗುತ್ತಿದೆ. ಈ ಎರಡೂ ಸೇವೆಗಳಿಗೆ ಪ್ರತ್ಯೇಕ ಕಾಲ್ ಸೆಂಟರ್ಗಳ ಮೂಲಕ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಇದು ಹೊರೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಈ ಎರಡೂ ಸೇವೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಇಲಾಖೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳುವುದು, ಪಾರದರ್ಶಕ ವ್ಯವಸ್ಥೆಗೆ ಪೂರಕವಾಗುವಂತೆ ಸಲಹಾ ಸಮಿತಿಯನ್ನು ಸಹ ರೂಪಿಸಲಾಗಿದೆ. 104 ಮತ್ತು 108 ಸಂಖ್ಯೆಗಳಲ್ಲಿ ಯಾವುದಾದರೂ ಒಂದು ಸಂಖ್ಯೆಯನ್ನು ಉಳಿಸಿಕೊಳ್ಳಲಾಗುವುದು ಎಂಬುದಾಗಿಯೂ ಇಲಾಖೆಯ ಮೂಲಗಳು ತಿಳಿಸಿವೆ. ಹಾಗೆಯೇ ಆಂಬ್ಯುಲೆನ್ಸ್ ವ್ಯವಸ್ಥೆಯಲ್ಲಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಮ್ಯಾಪಿಂಗ್, ತುರ್ತು ಸೇವೆಗೆ ಪೂರಕ ವೈದ್ಯರನ್ನು ಕಲ್ಪಿಸುವುದು, ತ್ವರಿತ ಗತಿಯಲ್ಲಿ ಸೇವೆ ನೀಡುವ ನಿಟ್ಟಿನಲ್ಲಿಯೂ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.