ನವದೆಹಲಿ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಸಂಕಷ್ಟಕ್ಕೆ ಸಿಲುಕಿರುವ ‘ತಾಂಡವ್’ ಸಿನಿಮಾ ತಂಡಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಸಿನಿಮಾ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್ ಮತ್ತು ಇತರರ ಬಂಧನಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇವರುಗಳ ಮನವಿ ಕುರಿತು ನ್ಯಾಯಪೀಠ ಯುಪಿ, ಎಂಪಿ, ಕರ್ನಾಟಕ, ಮಹಾರಾಷ್ಟ್ರ, ಬಿಹಾರ ಮತ್ತು ದೆಹಲಿಯಂತಹ ರಾಜ್ಯಗಳಿಂದ ಪ್ರತಿಕ್ರಿಯೆ ಕೋರಿದೆ.
ಬಾಲಿವುಡ್ ದಿಗ್ಗಜರಾದ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯಾ ಮತ್ತು ಮೊಹಮ್ಮದ್ ಝೀಶನ್ ಅಯೂಬ್ ನಟಿಸಿರುವ ಒಂಬತ್ತು ಸಂಚಿಕೆಗಳ ರಾಜಕೀಯ ಥ್ರಿಲ್ಲರ್ “ತಾಂಡವ್” ಇತ್ತೀಚೆಗೆ ಸ್ಟ್ರೀಮಿಂಗ್ ಪ್ರಾರಂಭಿಸಿತ್ತು.
ಇದರ ತಯಾರಕರ ವಿರುದ್ಧ ಉತ್ತರ ಪ್ರದೇಶದಲ್ಲಿ ಕನಿಷ್ಠ ಮೂರು ಪ್ರಕರಣಗಳು ದಾಖಲಾಗಿವೆ.
“ವೆಬ್ ಸರಣಿ ತಾಂಡವ್ನ ನಿರ್ಮಾಪಕ, ನಿರ್ದೇಶಕ ಮತ್ತು ಕಲಾವಿದರು ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆಯನ್ನು ಹಾಳುಮಾಡುವ ಮತ್ತು ಹಿಂದೂ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಅಪರಾಧವನ್ನು ಮಾಡಿದ್ದಾರೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.