ಬೆಂಗಳೂರು: ನಾಳೆಯಿಂದ ಆರಂಭವಾದಂತೆ ಫೆ. 5 ರ ವರೆಗೆ ರಾಜ್ಯದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ.
ಈ ಸಂಬಂಧ ಮಾತನಾಡಿರುವ ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಅಧಿವೇಶನದಲ್ಲಿ 11 ವಿಧೇಯಕಗಳು ಮಂಡನೆಯಾಗಲಿವೆ ಎಂದು ತಿಳಿಸಿದ್ದಾರೆ. ಅಧಿವೇಶನದ ಮೊದಲ ದಿನ ರಾಜ್ಯಪಾಲರು ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಾದ ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿಯೂ ಅವರು ಹೇಳಿದ್ದಾರೆ.
ಈ ಅಧಿವೇಶನದಲ್ಲಿ ಸರ್ಕಾರ ಈಗಾಗಲೇ ಹೊರಡಿಸಿರುವ ಆದೇಶಗಳನ್ನು ವಿಧೇಯಕಗಳ ರೂಪದಲ್ಲಿ ಮಂಡನೆ ಮಾಡಲಾಗುತ್ತದೆ. ಆರು ದಿನಗಳನ್ನು ಪ್ರಶ್ನೋತ್ತರ ಅವಧಿಯಾಗಿ ನಿಗದಿ ಮಾಡಲಾಗಿದೆ ಎಂದು ಕಾಗೇರಿ ತಿಳಿಸಿದ್ದಾರೆ. ಈ ಅಧಿವೇಶನದ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದನ್ನು ಎಲ್ಲರೂ ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.