ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಹಲವು ಸಂಘಗಳ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು, ಶಿಕ್ಷಕ ಮಿತ್ರ ಆ್ಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ, 2500 ಟಿಜಿಟಿ ಶಿಕ್ಷಕರ ನೇಮಕಕ್ಕೆ ಪೂರಕ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಾಕಿ ಇದ್ದ ಭಡ್ತಿ ಪ್ರಕ್ರಿಯೆಗಳನ್ನು, ಪದೋನ್ನತಿಯ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಶಿಕ್ಷಕರು ಮತ್ತು ಶಿಕ್ಷಕೇತರ ನೌಕರರ ಈಡೇರಿಸಲು ಸಾಧ್ಯವಿರುವ ಬೇಡಿಕೆಗಳಿಗೆ ಸಂಬಂಧಿಸಿದಂತೆ, ಆರ್ಥಿಕವಾಗಿ ಹೆಚ್ಚು ಹೊರೆಯಾಗದಂತಹ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅರ್ಹ ಬೇಡಿಕೆಗಳನ್ನು ಕಾಲಮಿತಿಯೊಳಗಾಗಿ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಶಿಕ್ಷಕರು, ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ, ವೃಂದ- ನೇಮಕಾತಿ ವಿಷಯಗಳ ಪರಿಷ್ಕರಣೆ, ನೇರ ನೇಮಕಾತಿ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಸರಿಪಡಿಸಲು ಪ್ರತ್ಯೇಕ ಮತ್ತು ಸಂಘಟನೆವಾರು ಪ್ರಸ್ತಾವನೆ ಸಲ್ಲಿಸುವಂತೆಯೂ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.