ಬೆಂಗಳೂರು: ಗಣಿಗಾರಿಕಾ ವಲಯದಲ್ಲಿನ ಸಮಸ್ಯೆಗಳ ಪರಿಹಾರ, ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ ಗಣಿ ಅದಾಲತ್ ಮತ್ತು ಮೈನಿಂಗ್ ಸ್ಕೂಲ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಧಾನ ಮಂಡಲ ಅಧಿವೇಶನದ ಬಳಿಕ ಈ ಅದಾಲತ್ ನಡೆಸಲಾಗುವುದು. ಇದು ಗಣಿಗಾರಿಕಾ ವಲಯದ 70% ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ. ಗಣಿಗಾರಿಕೆ ಇರುವ ಪ್ರದೇಶವಿರುವಲ್ಲಿ ಮೈನಿಂಗ್ ಸ್ಕೂಲ್ ಪ್ರಾರಂಭಕ್ಕೆ ಅವಕಾಶವಿರುವುದಾಗಿಯೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗಣಿಗಾರಿಕೆಗಳನ್ನು ನಡೆಸಲು ಅನುಮತಿ ಪಡೆಯಬೇಕಾದರೆ ಹಲವಾರು ಉಪಕ್ರಮಗಳಿವೆ. ಈ ಹಿನ್ನೆಲೆಯಲ್ಲಿ ಅಕ್ರಮ – ಸಕ್ರಮಕ್ಕೆ ಒತ್ತು ನೀಡಲಾಗುತ್ತದೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ತರುವುದಕ್ಕೂ ಮಾರ್ಗಸೂಚಿಯನ್ನು ಹೊರಡಿಸಲಾಗುವುದಾಗಿ ಅವರು ತಿಳಿಸಿದ್ದಾರೆ. ಬೇರೆ ರಾಜ್ಯಕ್ಕಿಂತ ಅಧಿಕ ಅದಿರು ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಇದರ ಸದುಪಯೋಗವನ್ನು ನಾವು ಪಡೆದುಕೊಳ್ಲಬೇಕಿದೆ ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.