ನವದೆಹಲಿ: ಜನವರಿ 26ರಂದು ಮಂಗಳವಾರ ರಾಜ್ಪಥ್ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಅಯೋಧ್ಯೆ ರಾಮ ಮಂದಿರದ ಪ್ರತಿರೂಪವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಸ್ತಬ್ಧಚಿತ್ರ ಪ್ರಥಮ ಬಹುಮಾನವನ್ನು ಗಳಿಸಿದೆ.
ಉತ್ತರಪ್ರದೇಶದ ಸ್ತಬ್ಧಚಿತ್ರ ಪ್ರಾಚೀನ ಪವಿತ್ರ ಪಟ್ಟಣ ಅಯೋಧ್ಯೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಿತ್ತು, ರಾಮ ದೇವಾಲಯದ ಪ್ರತಿರೂಪ, ‘ದೀಪೋತ್ಸವ’ದ ನೋಟ ಮತ್ತು ರಾಮಾಯಣ ಮಹಾಕಾವ್ಯದ ವಿವಿಧ ಕಥೆಗಳನ್ನು ಸಾರಿತ್ತು.
ಹುಲ್ಲು ಹಾಸಿನ ಮೇಲೆ ಮಹರ್ಷಿ ವಾಲ್ಮೀಕಿ ಕುಳಿತುಕೊಳ್ಳುವ ಮಾದರಿಯ ಮುಂಭಾಗ ಮತ್ತು ಹಿಂಭಾಗದಲ್ಲಿ ದೇವಾಲಯದ ಮಾದರಿಯನ್ನು ರೂಪಿಸಲಾಗಿತ್ತು. ಸಂತರ ವೇಷಭೂಷಣಗಳನ್ನು ಹಾಕಿಕೊಂಡ ಕಲಾವಿದರ ಗುಂಪು ಇದರಲ್ಲಿ ಇತ್ತು.
ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸ್ತಬ್ಧಚಿತ್ರದ ಪೈಕಿ ಉತ್ತರ ಪ್ರದೇಶದ ಸ್ತಬ್ಧಚಿತ್ರ ಅತ್ಯುತ್ತಮವೆಂದು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.