News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

PRAGATIಯ 35ನೇ ಆವೃತ್ತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಕ್ರಿಯಾಶೀಲ ಆಡಳಿತಕ್ಕಾಗಿನ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿನ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ PRAGATIಯ 35ನೇ ಆವೃತ್ತಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ವಹಿಸಿದ್ದರು.

ಸಭೆಯಲ್ಲಿ, ಒಂಬತ್ತು ಯೋಜನೆಗಳು ಮತ್ತು ಒಂದು ಕಾರ್ಯಕ್ರಮ ಸೇರಿದಂತೆ ಹತ್ತು ಕಾರ್ಯಸೂಚಿಗಳನ್ನು ಪರಿಶೀಲನೆ ಮಾಡಲಾಗಿದೆ.

ಒಂಬತ್ತು ಯೋಜನೆಗಳಲ್ಲಿ, ಮೂರು ಯೋಜನೆಗಳು ರೈಲ್ವೆ ಸಚಿವಾಲಯಕ್ಕೆ ಸೇರಿದ್ದಾಗಿದೆ, ಮೂರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ್ದಾಗಿದೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಪ್ರಚಾರ ಇಲಾಖೆ, ವಿದ್ಯುತ್ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯದ ತಲಾ ಒಂದು ಯೋಜನೆಯಾಗಿದೆ. ಈ ಒಂಬತ್ತು ಯೋಜನೆಗಳು 15 ರಾಜ್ಯಗಳಿಗೆ ಸಂಬಂಧಿಸಿದಂತೆ 54 ಸಾವಿರ 675 ಕೋಟಿ ರೂಪಾಯಿಗಳ ಒಟ್ಟು ವೆಚ್ಚವನ್ನು ಹೊಂದಿವೆ. ಒಡಿಶಾ, ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಪಂಜಾಬ್, ಜಾರ್ಖಂಡ್, ಬಿಹಾರ, ತೆಲಂಗಾಣ, ರಾಜಸ್ಥಾನ, ಗುಜರಾತ್, ಪಶ್ಚಿಮ ಬಂಗಾಳ, ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸೇರಿದ ಯೋಜನೆಯಾಗಿದೆ.

ಸಂವಾದದ ಸಂದರ್ಭದಲ್ಲಿ ಪ್ರಧಾನಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನವನ್ನೂ ಪರಿಶೀಲಿಸಿದರು. ಮೂಲಸೌಕರ್ಯ ಯೋಜನೆಗಳಿಗೆ ಅಡ್ಡಿಯಾಗುವ ಸಮಸ್ಯೆಗಳ ತ್ವರಿತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಮೋದಿ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಗತಿ ಸಭೆಗಳ 34 ನೇ ಆವೃತ್ತಿಯವರೆಗೆ, ಒಟ್ಟು 13.14 ಲಕ್ಷ ಕೋಟಿ ರೂಪಾಯಿ ವೆಚ್ಚವನ್ನು ಹೊಂದಿರುವ 283 ಯೋಜನೆಗಳನ್ನು ಪರಿಶೀಲಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top