ಬೆಂಗಳೂರು: ಫೆ. 3 ರಿಂದ ತೊಡಗಿದಂತೆ ಫೆ. 5 ರ ವರೆಗೆ ನಗರದ ಯಲಹಂಕ ವಾಯುನೆಲೆಯಲ್ಲಿ 13 ನೇ ಏರೋ ಇಂಡಿಯಾ-2021 ಏರ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಾಗರಿಕ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜ. 30 ರಿಂದ ತೊಡಗಿ ಫೆ. 5 ರ ವರೆಗಿನ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಏರ್ ಶೋ ಗೆ ಸಂಬಂಧಿಸಿದಂತೆ ವೈಮಾನಿಕ ಪ್ರದರ್ಶನ ಮತ್ತು ಏರ್ ಶೋ ಗಳನ್ನು ನಡೆಸುವುದಕ್ಕೆ ಅನುಕೂಲವಾಗುವಂತೆ ಈ ವ್ಯತ್ಯಾಸವನ್ನು ಮಾಡಲಾಗಿದೆ. ಜೊತೆಗೆ ತಾಲೀಮು ಮತ್ತು ಪ್ರದರ್ಶನದ ಸಮಯದಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಈ ಬದಲಾವಣೆಗೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಪೂಕರವಾದ ಮಾಹಿತಿಗಳನ್ನು ನೀಡುವಂತೆಯೂ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಬಿಐಎಎಲ್ ನ ಅಧಿಕೃತ ವೆಬ್ಸೈಟ್ ಮೂಲಕವೂ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಗಮನಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.