ಬೆಂಗಳೂರು: 2020-21 ನೇ ಸಾಲಿನ ಬಿ.ಎಡ್ ಕೋರ್ಸ್ ಗೆ ಸೇರಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿ ಮಾಡಿದ್ದ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ನೀಡಿದೆ.
ಅರ್ಜಿ ಸಲ್ಲಿಕೆಗೆ ಅಂತಿಮ ದಿನವಾಗಿ ಜ. 30 ರ ವರೆಗೆ ಅವಕಾಶವನ್ನು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯನ್ನೂ ಹೊರಡಿಸಿದೆ. ಈ ಸುತ್ತೋಲೆಯಲ್ಲಿ 2020-21 ನೇ ಸಾಲಿನಲ್ಲಿ ಎರಡು ವರ್ಷಗಳ ಬಿ.ಎಡ್ ಕೋರ್ಸ್ ಗೆ ದಾಖಲಾಗಲು ಅರ್ಜಿ ಸಲ್ಲಿಕೆಗೆ ಜ. 30 ರ ವರೆಗೆ ಅವಕಾಶ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಈ ಹಿಂದೆ 26.01.2021 ರ ವರೆಗೆ ಮಾತ್ರವೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಪ್ರಸ್ತುತ ಈ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.
ಈ ಸಂಬಂಧ ಇಲಾಖೆಯ ವೆಬ್ ಸೈಟ್ ನಲ್ಲಿಯೂ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ಎಲ್ಲಾ ವಿವರಣೆಗಳು, ಮಾಹಿತಿಗಳನ್ನು ಓದುವಂತೆ ಮತ್ತು ಕ್ರಮಬದ್ಧವಾಗಿ ಅರ್ಜಿ ಸಲ್ಲಿಕೆ ಮಾಡುವಂತೆಯೂ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ http://www.schooleducation.kar.nic.in/ ಅನ್ನು ಸಂಪರ್ಕಿಸುವಂತೆಯೂ ಇಲಾಖೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.