ಬೆಂಗಳೂರು: ಈ ಬಾರಿಯ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ಜೂನ್ ತಿಂಗಳ 14 ರಂದು ಕನ್ನಡ, 16 ರಂದು ಗಣಿತ, 18 ರಂದು ಇಂಗ್ಲೀಷ್, 21 ರಂದು ವಿಜ್ಞಾನ, 23 ರಂದು ಹಿಂದಿ, 25 ರಂದು ಸಮಾಜ ವಿಜ್ಞಾನ ಪರೀಕ್ಷೆಗಳನ್ನು ನಡೆಸಲಾಗುವುದಾಗಿ ತಿಳಿಸಿದ್ದಾರೆ. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಇದಕ್ಕೆ ಆಕ್ಷೇಪಣೆಯನ್ನು ಫೆ. 26 ರ ವರೆಗೆ ಸಲ್ಲಿಸಲು ಅವಕಾಶವಿರುವುದಾಗಿಯೂ ತಿಳಿಸಿದ್ದಾರೆ.
ಉಳಿದಂತೆ 6 ರಿಂದ 8ನೇ ತರಗತಿಯವರೆಗೆ ವಿದ್ಯಾಗಮ ತರಗತಿಗಳನ್ನು ನಡೆಸುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಫೆ. 1 ರಿಂದ 9, 10, 11 ಮತ್ತು 12 ನೇ ತರಗತಿಗಳು ಪೂರ್ಣ ದಿನ ನಡೆಯಲಿವೆ. ಮುಂದಿನ ಫೆ. ಯಲ್ಲಿ ತಾಂತ್ರಿಕ ಸಲಹಾ ಸಮಿತಿ ಇನ್ನೊಮ್ಮೆ ಸಭೆ ಸೇರಿ ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಫ್ಲೈನ್/ಆನ್ಲೈನ್ ತರಗತಿಗಳ ಆಯ್ಕೆ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.