ನವದೆಹಲಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಇದೀಗ ಸ್ಥಳೀಯರಿಂದಲೇ ವಿರೋಧ ವ್ಯಕ್ತವಾಗಿದೆ. ದೆಹಲಿ-ಹರಿಯಾಣದ ಸಿಂಘು ಗಡಿಯನ್ನು ಬಿಟ್ಟು ರೈತರು ಶೀಘ್ರವೇ ತೆರಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಪಂಜಾಬ್, ಹರಿಯಾನ ಸೇರಿದಂತೆ ವಿವಿಧ ಭಾಗಗಳ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಿಯರು ಕಿರಿಕಿರಿ ಅನುಭವಿಸುತ್ತಿದ್ದಾರೆ.
ಅದರಲ್ಲೂ ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ಮೆರವಣಿಗೆ ಹಿಂಸಾಚಾರದ ರೂಪಕ್ಕೆ ತಿರುಗಿತ್ತು. ಪೊಲೀಸರು ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿ ಪ್ರತಿಭಟನಾಕಾರರು ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದರು. ಇದು ಸ್ಥಳೀಯರ ಸಂಯಮವನ್ನು ಕೆರಳಿಸಿದೆ. ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ದೇಶದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
#WATCH | Delhi: Group of people claiming to be locals gather at Singhu border demanding that the area be vacated.
Farmers have been camping at the site as part of their protest against #FarmLaws. pic.twitter.com/7jCjY0ME9Z
— ANI (@ANI) January 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.