ಬೆಂಗಳೂರು: ರಜಾ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸುವ ರಾಜ್ಯದ ಪೊಲೀಸರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ವಾರದಲ್ಲಿ ಇರುವ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಪೊಲೀಸರಿಗೆ ವಾರಕ್ಕೊಂದು ರಜೆ ನೀಡುವುದು ಕಡ್ಡಾಯವಾಗಿದ್ದರೂ, ಅದನ್ನು ತೆಗೆದುಕೊಳಳುವುದು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ಈ ರಜೆಯನ್ನು ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳೂ ಬಿಡುವುದಿಲ್ಲ ಎಂಬ ದೂರು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ತಮ್ಮ ವಾರದ ರಜೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ಪೊಲೀಸರಿಗೆ ಅವರ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಆದರೆ, ಈ ಆದೇಶ ಸರಿಯಾಗಿ ಪಾಲನೆಯಾದಂತಿಲ್ಲ. ಹಾಗಾಗಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭ ಹೊರತುಪಡಿಸಿ, ಉಳಿದಂತೆ ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಸೂದ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.