ನವದೆಹಲಿ: ಲಸಿಕೆ ಅಭಿಯಾನ ಆರಂಭವಾದ ಮೊದಲ ಆರು ದಿನಗಳಲ್ಲಿ ಭಾರತವು ಒಂದು ಮಿಲಿಯನ್ ಲಸಿಕೆಗಳನ್ನು ತನ್ನ ಜನರಿಗೆ ನೀಡಿದ್ದು, ಈ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚು ಲಸಿಕೆ ನೀಡಿದ ವೇಗದ ದೇಶವಾಗಿ ಹೊರಹೊಮ್ಮಿದೆ ಎಂದು ಸರ್ಕಾರ ಹೇಳಿದೆ.
ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, ಯುನೈಟೆಡ್ ಸ್ಟೇಟ್ಸ್ 10 ದಿನಗಳಲ್ಲಿ, ಸ್ಪೇನ್ 12 ದಿನಗಳಲ್ಲಿ, ಇಸ್ರೇಲ್ 14 ದಿನಗಳಲ್ಲಿ, ಯುಕೆ 18 ದಿನಗಳಲ್ಲಿ, ಇಟಲಿ 19 ದಿನಗಳಲ್ಲಿ ಮತ್ತು ಜರ್ಮನಿಯು 20 ದಿನಗಳಲ್ಲಿ ಒಂದು ಮಿಲಿಯನ್ ಲಸಿಕೆಯ ಸಾಧನೆ ಮಾಡಿದೆ ಎಂದಿದ್ದಾರೆ.
ನಮ್ಮ ದೇಶದಲ್ಲಿ ಈವರೆಗೆ ಒಟ್ಟು 25 ಲಕ್ಷದ ಏಳು ಸಾವಿರ ಜನರಿಗೆ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ, ಭಾರತದ ದೈನಂದಿನ ಕೋವಿಡ್ ಪ್ರಕರಣಗಳು ನಿರಂತರವಾಗಿ ಕ್ಷೀಣಿಸುತ್ತಿವೆ ಎಂದು ಭೂಷಣ್ ಹೇಳಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಮಾತ್ರ ಇನ್ನೂ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳಿವೆ, ಇದು ಒಟ್ಟು ಪ್ರಕರಣಗಳಲ್ಲಿ ಶೇಕಡಾ 67 ಕ್ಕೆ ಕಾರಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.