ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ಆಸನಗಳನ್ನು ಬಳಕೆ ಮಾಡಿಕೊಂಡು ಮೆಟ್ರೋ ರೈಲುಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಬಿಎಂಆರ್ಸಿಎಲ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಕೊರೋನಾ ಬಳಿಕ ಮೆಟ್ರೋ ಸೇವೆಗಳನ್ನು ಆರಂಭ ಮಾಡಲಾಗಿದೆ. ಕೇಂದ್ರ ಸರ್ಕಾರ ಮೆಟ್ರೋ ಸಂಚಾರಕ್ಕೆ ಸಂಬಂಧಿಸದಂತೆ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡೇ ಸಂಚಾರ ಆರಂಭ ಮಾಡಲಾಗಿದೆ. ಮೆಟ್ರೋದಲ್ಲಿ ಕೇವಲ 50% ಪ್ರಯಾಣಿಕರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಅದನ್ನು ಅನುಸರಿಸಿಕೊಂಡೇ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. ಆದರೆ ಇದೀಗ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು ಮತ್ತೆ ಸಂಪೂರ್ಣ ಆಸನಗಳನ್ನು ಬಳಕೆ ಮಾಡಿಕೊಂಡು ಮೆಟ್ರೋ ಸಂಚಾರಕ್ಕೆ ಅನುಮತಿ ನೀಡುವಂತೆ ಕೋರಿ ನಿಗಮ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.
ಮೆಟ್ರೋಗಳಲ್ಲಿನ ಆಸನಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡಿದ್ದೇ ಆದಲ್ಲಿ ಸಂಚಾರ ದಟ್ಟಣೆಯ ನಿಯಂತ್ರಣವೂ ಸಾಧ್ಯವಾಗಲಿದೆ. ಜೊತೆಗೆ ಹೆಚ್ಚು ಪ್ರಯಾಣಿಕರಿಗೆ ಮೆಟ್ರೋ ಸೇವೆಯನ್ನು ಬಳಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ. ಹಾಗೆಯೇ ಮೆಟ್ರೋದಲ್ಲಿ ನಿಂತು ಪ್ರಯಾಣಿಸುವ ಪ್ರಯಾಣಿಕರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಕ್ಕೂ ಅನುಕೂಲಕಾರಿಯಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.