ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ರ ಆರ್ಥಿಕ ಸಮೀಕ್ಷೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಸಮೀಕ್ಷೆಯು ಐಎಂಎಫ್ ಆಧಾರದಲ್ಲಿ 2022ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 11 ಕ್ಕೆ ನಿರೀಕ್ಷಿಸಿದೆ. 2021 ನೇ ಹಣಕಾಸು ವರ್ಷದಲ್ಲಿ ಬೆಳವಣಿಗೆ ದರ 7.7% ಎಂದು ನಿರೀಕ್ಷಿಸಿದೆ.
ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆರ್ಥಿಕ ಸಮೀಕ್ಷೆ 2020-21, ನಿವ್ವಳ ರಫ್ತು ಮತ್ತು ಸರ್ಕಾರದ ವ್ಯಯವು ಬೆಳವಣಿಗೆಯನ್ನು ಮತ್ತಷ್ಟು ಕುಸಿತದಿಂದ ಎತ್ತಿದೆ ಎಂದು ಸೂಚಿಸಿದೆ.
ಪ್ರಸಕ್ತ ಹಣಕಾಸು ವರ್ಷದ ಜಿಡಿಪಿ ಶೇಕಡಾ 7.7 ರಷ್ಟು ಕುಗ್ಗಲಿದೆ ಎಂದು ಅದು ಹೇಳಿದೆ. ಮುಂದಿನ ಹಣಕಾಸು ವರ್ಷದ ಜಿಡಿಪಿ ಶೇಕಡಾ 15.4 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ.
ಮೆಗಾ ವ್ಯಾಕ್ಸಿನೇಷನ್ ಡ್ರೈವ್ ಆರ್ಥಿಕತೆಯ ವಿ ಆಕಾರದ ಚೇತರಿಕೆಗೆ ಬೆಂಬಲ ನೀಡುತ್ತದೆ ಎಂದು ಸಮೀಕ್ಷೆ ಹೇಳಿದೆ. ಈ ಕಠಿಣ ಕಾಲದಲ್ಲೂ ಕೃಷಿ ಕ್ಷೇತ್ರವು ಬೆಳವಣಿಗೆಯ ಪಥದಲ್ಲಿ ದೃಢವಾಗಿ ಉಳಿದಿದೆ ಎಂದು ಸಮೀಕ್ಷೆಯು ತೋರಿಸಿದೆ.
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಉತ್ಪಾದನೆ ಮತ್ತು ನಿರ್ಮಾಣ ಸೇರಿದಂತೆ ಸಂಪರ್ಕ ಆಧಾರಿತ ಸೇವೆಗಳು ತೀವ್ರ ಕುಸಿತವನ್ನು ಎದುರಿಸುತ್ತಿವೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.