ನವದೆಹಲಿ: ಸಂಸತ್ತಿನಲ್ಲಿ ಇಂದು ರಾಷ್ಟ್ರಪತಿ ಕೋವಿಂದ್ ಅವರು ಮಾಡಿದ ಭಾಷಣವನ್ನು ಬಹಿಷ್ಕರಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರತಿ ಪಕ್ಷಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶಕ್ಕೆ ಯಾವ ರೀತಿಯ ನಿದರ್ಶನ ಮತ್ತು ಸಂಪ್ರದಾಯವನ್ನು ಇವರು ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಸಾದ್, “ರಾಷ್ಟ್ರಪತಿಗಳು ನಮ್ಮ ಗೌರವಕ್ಕೆ ಅರ್ಹರಾಗಿದ್ದಾರೆ. ಆದರೆ ಪ್ರತಿಪಕ್ಷಗಳು ಅವರ ಭಾಷಣವನ್ನು ಬಹಿಷ್ಕರಿಸಲು ಯತ್ನಿಸಿದ್ದು ವಿಷಾದಕರ. ಸುಮಾರು 50 ವರ್ಷಗಳ ಕಾಲ ಭಾರತವನ್ನು ಆಳಿದ್ದ ಕಾಂಗ್ರೆಸ್ಸಿನ ನಡವಳಿಕೆ ಬೇಜವಾಬ್ದಾರಿಯುತವಾಗಿದೆ” ಎಂದಿದ್ದಾರೆ.
“ಕಾಂಗ್ರೆಸ್ ದೇಶಕ್ಕೆ ಯಾವ ರೀತಿಯ ನಿದರ್ಶನ ಮತ್ತು ಸಂಪ್ರದಾಯವನ್ನು ನೀಡುತ್ತಿದೆ ಎಂಬುದು ಬಹಳ ಮುಖ್ಯವಾದ ವಿಷಯವಾಗಿದೆ” ಎಂದು ಅವರು ಹೇಳಿದರು.
ಬಿಜೆಪಿ ಕೂಡ ದೀರ್ಘಕಾಲದಿಂದ ಪ್ರತಿಪಕ್ಷದಲ್ಲಿತ್ತು ಎಂದು ಹೇಳಿದ ಅವರು, “ಯುಪಿಎ ಸರ್ಕಾರ ಮಾಡಿದ ಕಾರ್ಯಗಳು, ದುಷ್ಕೃತ್ಯಗಳು ಮತ್ತು ನಿರ್ಬಂಧಗಳ ಬಗ್ಗೆ ನಮಗೆ ಗಂಭೀರ ಕಾಳಜಿ ಇತ್ತು ಆದರೆ ರಾಷ್ಟ್ರಪತಿಗಳ ಬಗ್ಗೆ ನಾವು ಹೊಂದಿರುವ ಗೌರವದಿಂದಾಗಿ ನಾವು ಎಂದಿಗೂ ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಲಿಲ್ಲ” ಎಂದು ಅವರು ಹೇಳಿದರು.
ಕಾಂಗ್ರೆಸ್ ಸೇರಿದಂತೆ 18 ಪ್ರತಿಪಕ್ಷಗಳು ಮೂರು ಕೃಷಿ ಕಾನೂನುಗಳ ಬಗ್ಗೆ ರೈತರ ಆಂದೋಲನಕ್ಕೆ ಬೆಂಬಲ ನೀಡಲು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಿದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.