ಲಕ್ನೋ: ನಾಗರಿಕ ಸೇವೆಗಳು, ಸೇನೆ, ಪೊಲೀಸ್, ವಾಯುಪಡೆ, ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ನಡೆಸಲು ಆಶಿಸುವ ಹೆಣ್ಣು ಮಕ್ಕಳಿಗೆ ಕೌನ್ಸೆಲಿಂಗ್ ಶಿಬಿರಗಳನ್ನು ನಡೆಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.
ತನ್ನ ಮಿಷನ್ ಶಕ್ತಿ ಅಭಿಯಾನದಡಿಯಲ್ಲಿ ಶಿಬಿರಗಳನ್ನು ನಡೆಸಲು ಮುಂದಾಗಿದೆ.
ಈ ಕೌನ್ಸೆಲಿಂಗ್ ಶಿಬಿರಗಳನ್ನು ‘ಪ್ರಶಾಸನ್ ಕಿ ಪಾಠಶಾಲಾ’ ಎಂದು ಕರೆಯಲಾಗುತ್ತದೆ. ಫೆಬ್ರವರಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಇದು ನಡೆಯಲಿದೆ.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಇತರ ಆಡಳಿತ ಅಧಿಕಾರಿಗಳು ಶಿಬಿರಗಳ ಮುಖ್ಯಸ್ಥರಾಗಿ ತರಗತಿಗಳಿಗೆ ದಾಖಲಾಗುವ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಫೆಬ್ರವರಿಯಲ್ಲಿ ನಿಗದಿಯಾದ ಇತರ ಕಾರ್ಯಕ್ರಮಗಳ ಪೈಕಿ, ಬಾಲಕಿಯರನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ಬ್ಲಾಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಇದರೊಂದಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.
ಫೆಬ್ರವರಿ 1 ರಿಂದ 13 ರವರೆಗೆ, ಕೌಟುಂಬಿಕ ಹಿಂಸಾಚಾರ ತಡೆ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ 2013 ರ ಬಗ್ಗೆ ಜಾಗೃತಿ, ಸಭೆಗಳು, ಸೆಮಿನಾರ್ಗಳು ನಡೆಯಲಿವೆ.
‘ಹಕ್ ಕಿ ಬಾತ್, ಜಿಲ್ಲಾಧಿಕಾರಿ ಕೆ ಸಾಥ್’ ಎಂಬ ಮತ್ತೊಂದು ಕಾರ್ಯಕ್ರಮ ನಡೆಯಲಿದ. ಕೌಟುಂಬಿಕ ಹಿಂಸೆ, ವರದಕ್ಷಿಣೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಇತ್ಯಾದಿ ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಧೀಶರು ಮಹಿಳೆಯರೊಂದಿಗೆ ಎರಡು ಗಂಟೆಗಳ ಸಂವಾದ ನಡೆಸಲಿದ್ದಾರೆ.
ಈ ಮಹಿಳೆಯರಿಗೆ ಲಭ್ಯವಿರುವ ಕಾನೂನು ಪರಿಹಾರಗಳ ಬಗ್ಗೆ ಮಾರ್ಗದರ್ಶನವನ್ನು ಇಲ್ಲಿ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.