ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 29.28 ಲಕ್ಷ ಜನರಿಗೆ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 5.72 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ -19 ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಅಲ್ಲದೆ, ಕಳೆದ 24 ಗಂಟೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ರೋಗಿಗಳ ಒಟ್ಟು ಚೇತರಿಕೆಯೊಂದಿಗೆ ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 96.96 ಕ್ಕೆ ತಲುಪಿದೆ.
ಈ ಕಾಯಿಲೆಯಿಂದ ಈಗಾಗಲೇ ಒಂದು ಕೋಟಿ ಮೂರು ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ -19 ಸಕ್ರಿಯ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಕುಸಿಯುತ್ತಿವೆ.
ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷ 71 ಸಾವಿರ 686 ಆಗಿದ್ದು, ಇದು ಒಟ್ಟು ಸಕಾರಾತ್ಮಕ ಪ್ರಕರಣಗಳಲ್ಲಿ ಕೇವಲ 1.60 ಶೇಕಡಾವನ್ನು ಮಾತ್ರ ಒಳಗೊಂಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 18 ಸಾವಿರ 855 ಹೊಸ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ವಿವಿಧ ಪ್ರಯೋಗಾಲಯಗಳು ಏಳು ಲಕ್ಷ 42 ಸಾವಿರಕ್ಕೂ ಹೆಚ್ಚು ಕರೋನಾ ವೈರಸ್ ಮಾದರಿಯ ಪರೀಕ್ಷೆಗಳನ್ನು ನಡೆಸಿವೆ ಮತ್ತು ದೇಶದಲ್ಲಿ ಇದುವರೆಗೆ 19 ಕೋಟಿ 50 ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.